ಚಿತ್ರದುರ್ಗ: ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡ ಬೆನ್ನಲ್ಲೇ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ‘ನಾನು ಮಾರಾಟಕ್ಕಿಲ್ಲ, ನಾನು ಗೂಳಿಹಟ್ಟಿ’ ಎಂದು ತಮ್ಮ ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದಾರೆ.
ಕಾಂಗ್ರೆಸ್ ನಾಯಕರು ಬಿಜೆಪಿ ಶಾಸಕರನ್ನು ಸೆಳೆಯುತಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಗೂಳಿಹಟ್ಟಿ ಶೇಖರ್ ‘I am not a salable man, iam gulihatti’ ಎಂದು ಸ್ಟೇಟಸ್ ಹಾಕಿಕೊಂಡಿರುವುದು ಕುತೂಹಲ ಮೂಡಿಸಿದೆ ಮತ್ತು ಜಿಲ್ಲೆಯಲ್ಲಿ ಕೈ ಮತ್ತು ಬಿಜೆಪಿ ನಾಯಕರ ನಡುವೆ ಚರ್ಚೆಗೆ ಗ್ರಾಸವಾಗಿದೆ.
ಗೂಳಿಹಟ್ಟಿ ಶೇಖರ್ 2008ರಲ್ಲಿ ಪಕ್ಷೇತರ ಶಾಸಕರಾಗಿ ಗೆದ್ದು, ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದರು. 2013ರಲ್ಲಿ ಅವರು ಪಕ್ಷೇತರರಾಗಿ ನಿಂತು ಸೋಲನುಭವಿಸಿದ್ದರು. 2018ರ ಚುನಾವಣೆಯಲ್ಲಿ ಬಿಜೆಪಿಗೆ ಸೇರಿ ಹೊಸದುರ್ಗದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.